Breaking News

ಚಿತ್ರದುರ್ಗ: ಹಿರಿಯೂರಲ್ಲಿ ಮಹಿಳೆ ಹತ್ಯೆ, ಅಪ್ರಾಪ್ತ ಸೇರಿ ಒಂದೇ ಕುಟುಂಬದ ನಾಲ್ವರು ಅರೆಸ್ಟ್!

ಚಿತ್ರದುರ್ಗ: ಹಸು ಮೇಯಿಸುತ್ತಿದ್ದ ಮಹಿಳೆ ಮೇಲೆ ಅಸಭ್ಯವಾಗಿ ವರ್ತಿಸಿದ ಅಪ್ರಾಪ್ತ ಬಾಲಕನನ್ನು ಮಹಿಳೆ ವಿರೋಧಿಸಿದ್ದಕ್ಕೆ, ವಿಷಯ ಬಹಿರಂಗವಾಗುವ ಭಯದಲ್ಲಿ ಆಕೆಯನ್ನು ಹಲ್ಲೆ ಮಾಡಿ ಕೊಲೆ ಮಾಡಿದ ಆರೋಪದಡಿ ನಾಲ್ವರನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆದಿವಾಲ ಭೋವಿ ಕಾಲೋನಿ ಗ್ರಾಮದ ಗಂಗಮ್ಮ ಸೆ.6ರಂದು ಹಸು ಮೇಯಿಸುತ್ತಿದ್ದ ವೇಳೆ ಅಪ್ರಾಪ್ತ ಬಾಲಕ ಬಲವಂತವಾಗಿ ಹಿಡಿದುಕೊಳ್ಳಲು ಯತ್ನಿಸಿದ್ದಾನೆ. ಇದನ್ನು ವಿರೋಧಿಸಿ ಗಂಗಮ್ಮ ಕೂಗಿಕೊಂಡಾಗ, ಬಾಲಕನ ತಂದೆ ಲವ ಹಾಗೂ ಚಿಕ್ಕಪ್ಪಂದಿರಾದ ಕುಶ, ತಿಪ್ಪೇಸ್ವಾಮಿ ಸ್ಥಳಕ್ಕೆ ಬಂದು ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಗಂಗಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಲವ, ಕುಶ, ತಿಪ್ಪೇಸ್ವಾಮಿ ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಅಪ್ರಾಪ್ತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *