ತುಮಕೂರು: ನಗರದ ಉಪ್ಪಾರಹಳ್ಳಿ ಬಳಿ ಗುರುವಾರ ಮಧ್ಯಾಹ್ನ ಮನೆಗೆ ನುಗ್ಗಿದ ಕಳ್ಳ, ಇಬ್ಬರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಗೇಟ್ ಮತ್ತು ಮನೆಯ ಬಾಗಿಲು ತೆರೆದಿತ್ತು. ಒಳಗೆ ಹೋದ ಕಳ್ಳ ಮನೆಯಲ್ಲಿ ಮಲಗಿದ್ದ ವೆಂಕಟಲಕ್ಷ್ಮಮ್ಮ ಅವರ ಮೇಲೆ ಹಲ್ಲೆ ನಡೆಸಿ, ಸುಮಾರು 60 ಗ್ರಾಂ ಚಿನ್ನದ ಸರ ಕಿತ್ತಿದ್ದಾನೆ. ವೆಂಕಟಲಕ್ಷ್ಮಮ್ಮ ಅವರ ಸೊಸೆ ನಂದಿನಿ ಕಳ್ಳನನ್ನು ತಡೆಯಲು ಮುಂದಾಗಿದ್ದು, ಅವರ ಕೊರಳಿನಲ್ಲಿದ್ದ 40 ಗ್ರಾಂ ಸರವನ್ನೂ ಕಿತ್ತುಕೊಂಡು ಹೋಗಿದ್ದಾನೆ.ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳನ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

