ಬೆಂಗಳೂರು: ಪತಿಯ ಕಿರುಕುಳದಿಂದ ಮನನೊಂದು ಪ್ರೀತಿ (20) ಎಂಬಾಕೆ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿ, ಭರತ್ ಎಂಬಾತನನ್ನು ಪ್ರೀತಿಸಿ ಇತ್ತೀಚೆಗೆ ಮದುವೆಯಾಗಿದ್ದರು. ದಂಪತಿ ಲಗ್ಗೆರೆಯ ಭೈರವೇಶ್ವರ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕ್ಯಾಬ್ ಚಾಲಕನಾದ ಭರತ್, ಪತ್ನಿಯ ಶೀಲ ಶಂಕಿಸಿ ಪ್ರತಿನಿತ್ಯ ಜಗಳವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಪತಿಯ ಕಿರುಕುಳದಿಂದ ಬೇಸತ್ತಿದ್ದ ಪತ್ನಿ, ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಮಗಳ ಸಾವಿಗೆ ಅಳಿಯ ಭರತ್ ಕಾರಣ ಎಂದು ಪ್ರೀತಿ ಪೋಷಕರು ದೂರು ಕೊಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

