Breaking News

ಅಕ್ರಮ ಮದ್ಯ ಸಾಗಾಟ: 400 ಲೀಟರ್ ಗೋವಾ ಮದ್ಯ ಜಪ್ತಿ; ಇಬ್ಬರು ಅರೆಸ್ಟ್

ಖಾನಾಪುರದ ಕಣಕುಂಬಿ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 400 ಲೀಟರ್ ಗೋವಾ ಮದ್ಯವನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೋವಾದಿಂದ ಬೆಳಗಾವಿಗೆ ಬರುತ್ತಿದ್ದ ಭಾರತ್ ಬೆಂಜ್ ಗೂಡ್ಸ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದ ಹಿಂಭಾಗದಲ್ಲಿ ಪಾರ್ಟಿಷನ್ ಮಾಡಿ ಮದ್ಯವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಪ್ಪ ಮಾರುತಿ ಬೆಳ್ಳಿಕುಂಪಿ ಹಾಗೂ ಮಂಜುನಾಥ ಹನಮಂತಪ್ಪ ದೇಸಾಯಿ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಮದ್ಯ ಹಾಗೂ ವಾಹನದ ಒಟ್ಟು ಅಂದಾಜು ಮೌಲ್ಯ ₹10.40 ಲಕ್ಷ ಎಂದು ತಿಳಿದುಬಂದಿದೆ. ಖಾನಾಪುರ ಅಬಕಾರಿ ನಿರೀಕ್ಷಕ ಮಲ್ಲೇಶಿ ಉಪ್ಪಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಖಾನಾಪುರ ಅಬಕಾರಿ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *