ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಮ್ಮತಾ ಸೇನಾ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಲು ಪ್ರತಿಭಟನಾಕಾರರು ಬ್ಯಾರಿಕೇಡ್ ತಳ್ಳಿ ಒಳನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. ನೇಮಕಾತಿ ಪ್ರಕ್ರಿಯೆ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು, ಪ್ರತಿಭಟನಾ ವೇದಿಕೆ ಹಾಗೂ ಶಾಮಿಯಾನ ತೆರವುಗೊಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

