Breaking News

ಬೀದರ್‌ನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಟ: ಲಕ್ಷಾಂತರ ಮೌಲ್ಯದ ಅಕ್ಕಿ ವಶ, ವಾಹನ ಜಪ್ತಿ

ಬೀದರ್‌ನಲ್ಲಿ ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಚಿಟಗುಪ್ಪದ ಶಿವಾಜಿ ವೃತ್ತದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪಡಿತರ ಅಕ್ಕಿಯನ್ನು ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯಗಳ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಘಟನೆ ಸಂಬಂಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಸಾಗಾಟದ ಹಿಂದೆ ಯಾರಿದ್ದಾರೆ ಹಾಗೂ ಅಕ್ಕಿಯನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *