Breaking News

ನಕಲಿ ಔಷಧಿ ಜಾಲದ ಕಿಂಗ್‌ಪಿನ್ʼಗಳ ಬೆನ್ನುಬಿದ್ದ SIT: ಬೆಂಗಳೂರು ಸೇರಿದಂತೆ ಏಕಕಾಲಕ್ಕೆ ಹಲವೆಡೆ ರೇಡ್!

ತಾವರೆಕೆರೆ ನಕಲಿ ಮೆಡಿಸಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಎಸ್‌ಐಟಿ ಹಾಗೂ ಡ್ರಗ್ಸ್ ಕಂಟ್ರೋಲ್ ಇಲಾಖೆ ಅಧಿಕಾರಿಗಳು ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಕಡೆ ಹಾಗೂ ಹರಿಯಾಣ, ಹಿಮಾಚಲ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಕಲಿ ಔಷಧಿ ಸರಬರಾಜು ಮಾಡುತ್ತಿದ್ದ ಫಾರ್ಮ್‌ಗಳು ಮತ್ತು ಕಂಪನಿಗಳ ಮೇಲೆ ಶೋಧ ನಡೆಸಲಾಗಿದೆ. ನಕಲಿ ಬಾಟಲ್‌, ಲೇಬಲ್ ಬಳಸಿ ಔಷಧಿ ತಯಾರಿಸಿ ಸರಬರಾಜು ಮಾಡುತ್ತಿದ್ದ ಜಾಲದ ಬಗ್ಗೆ ತನಿಖೆ ಮುಂದುವರಿದಿದ್ದು, ಕಿಂಗ್‌ಪಿನ್ ಪ್ರಶಾಂತ್ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೃಪಾ ಫಾರ್ಮ್ ಮಾಲೀಕ ವೀರೇಶ್ ಮನೆ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಖಲೆಗಳಿಗಾಗಿ ಪರಿಶೀಲನೆ ನಡೆಸಲಾಗಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *