Breaking News

ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಹಲ್ಲೆ ; ಯುವಕರ ಮಾರಾಮಾರಿ ವಿಡಿಯೋ ವೈರಲ್!

ಬೆಂಗಳೂರು : ಸಿಗ್ನಲ್‌ನಲ್ಲಿ ಹಾರ್ನ್ ಹೊಡೆದ ವಿಚಾರಕ್ಕೆ ಇಬ್ಬರು ಬೈಕ್ ಸವಾರರು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಗರದ ಕೂಡ್ಲು ಗೇಟ್ ಬಳಿ ನಡೆದಿದೆ. ನಿನ್ನೆ ಸಂಜೆ ಸುಮಾರು 7 ಗಂಟೆ ವೇಳೆಗೆ ಘಟನೆ ನಡೆದಿದ್ದು, ಇಬ್ಬರು ಯುವಕರು ಕ್ಯಾಬ್ ಚಾಲಕನಿಗೆ ಮನಸೋ ಇಚ್ಛೆ ಥಳಿಸಿದ್ದಾರೆ. ಸಿಗ್ನಲ್‌ನಲ್ಲಿ ಹಾರ್ನ್ ಹೊಡೆದಿದ್ದಕ್ಕೆ ಕ್ಯಾಬ್ ಚಾಲಕ ಹಾಗೂ ಬೈಕ್ ಸವಾರರ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ಇಬ್ಬರು ಯುವಕರು ನಡು ರಸ್ತೆಯಲ್ಲೇ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಯ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Share News

About BigTv News

Check Also

2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ RFO ಲೋಕಾಯುಕ್ತ ಬಲೆಗೆ

ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ …

Leave a Reply

Your email address will not be published. Required fields are marked *