ತುಮಕೂರು: ಗುಬ್ಬಿ ವಲಯ ಅರಣ್ಯಾಧಿಕಾರಿ (RFO) ಕೆ.ಎಸ್. ಸತೀಶ್ ಚಂದ್ರ ಅವರು ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ಶಿವರಾಜು ಅವರಿಂದ ಲಂಚ ಪಡೆಯುವಂತೆ ಹೊರಗುತ್ತಿಗೆ ನೌಕರ ಶೌಕತ್‌ಗೆ ಸೂಚಿಸಿದ್ದರು ಎನ್ನಲಾಗಿದೆ. ಅರಣ್ಯ ಇಲಾಖೆಯ ಕಾಮಗಾರಿಗೆ ಮಂಜೂರಾದ ಮೊತ್ತದ ಶೇ.30ರಷ್ಟು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸತೀಶ್ ಚಂದ್ರ, ಈಗಾಗಲೇ ₹50 ಸಾವಿರ ಪಡೆದಿದ್ದರು. ಉಳಿದ ₹2.50 ಲಕ್ಷಕ್ಕಾಗಿ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಗುತ್ತಿಗೆದಾರ ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಗುಬ್ಬಿ RFO ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಸತೀಶ್ ಚಂದ್ರ ಹಾಗೂ ಶೌಕತ್‌ನನ್ನು ವಶಕ್ಕೆ ಪಡೆದಿದ್ದಾರೆ. ಸತೀಶ್ ಚಂದ್ರ ಸೂಚನೆಯಂತೆ ಶೌಕತ್ ₹2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
