ವಿಜಯಪುರ ತಾಲೂಕಿನ ಗೋಳಸಂಗಿ ಗ್ರಾಮದಲ್ಲಿ ನಡೆದಿದ್ದ ಎಸ್‌ಬಿಐ ಎಟಿಎಂ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹19 ಲಕ್ಷಕ್ಕೂ ಅಧಿಕ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ರಾತ್ರಿ ವೇಳೆ ಮುಸುಕುಧಾರಿ ಕಳ್ಳರು ಎಟಿಎಂ ಕೇಂದ್ರಕ್ಕೆ ನುಗ್ಗಿ ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರವನ್ನೇ ಕತ್ತರಿಸಿ ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ನಡೆಸಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಕಳವು ಹಣ ಹಾಗೂ ವಾಹನ ಜಪ್ತಿ ಮಾಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
