ಉಡುಪಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹5.73 ಲಕ್ಷ ಪಡೆದು ವಂಚಿಸಿರುವ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಪುಷ್ಪರಾಜ್ ಶೆಟ್ಟಿ ಅವರಿಗೆ ಯು.ಕೆ.ಯಲ್ಲಿ ಹೌಸ್‌ಕೀಪಿಂಗ್ ಸೂಪರ್‌ವೈಸರ್ ಉದ್ಯೋಗ ಕೊಡಿಸುವುದಾಗಿ ಆಶ್ಲೆ ಕರ್ನೇಲಿಯೋ ಎಂಬಾತ ಭರವಸೆ ನೀಡಿದ್ದ. ವೀಸಾ ಪ್ರಕ್ರಿಯೆ, ಮೆಡಿಕಲ್ ಪರೀಕ್ಷೆ, ವೀಸಾ ಸ್ಟಾಂಪಿಂಗ್ ಹಾಗೂ ಎಂಬಸಿ ಪ್ರೊಸೆಸಿಂಗ್ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು ₹5.73 ಲಕ್ಷ ಹಣ ಪಡೆದಿದ್ದಾರೆ. ಈ ಪೈಕಿ ಯು.ಕೆ. ವೀಸಾ ಪ್ರಕ್ರಿಯೆಗಾಗಿ ₹2 ಲಕ್ಷ ಪ್ರೊಸೆಸಿಂಗ್ ಶುಲ್ಕ ಪಾವತಿಸಲಾಗಿತ್ತು. ನಂತರ ವೀಸಾ ತಿರಸ್ಕೃತವಾಗಿದೆ ಎಂದು ತಿಳಿಸಿ ಹಣ ಹಾಗೂ ಪಾಸ್‌ಪೋರ್ಟ್ ವಾಪಸು ನೀಡುವುದಾಗಿ ಆರೋಪಿಗಳು ಭರವಸೆ ನೀಡಿದ್ದರು. ಆದರೆ ಬಳಿಕ ಫೋನ್ ಸಂಪರ್ಕ ಕಡಿತಗೊಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
