Breaking News

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ ಔಷಧಿಗಳ ಭಾರಿ ಸಂಗ್ರಹ ಪತ್ತೆಹಚ್ಚಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮಾಲೀಕ ವೀರೇಶ್‌ಕುಮಾರ್‌ನನ್ನು ಬಂಧಿಸಲಾಗಿದೆ. ಕ್ಯಾನ್ಸರ್‌ ಮಾತ್ರೆಗಳು, ಜೀವ ರಕ್ಷಕ ಔಷಧಿಗಳು ಹಾಗೂ ಐಸಿಯು ಇಂಜೆಕ್ಷನ್‌ಗಳನ್ನು ನಕಲಿ ಮಾಡಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆ, ಕ್ಲಿನಿಕ್‌ ಮತ್ತು ಮೆಡಿಕಲ್‌ ಶಾಪ್‌ಗಳಿಗೆ ಪೂರೈಸಲಾಗುತ್ತಿತ್ತು ಎನ್ನಲಾಗಿದೆ. ಅವಧಿ ಮುಗಿದ ಔಷಧಿಗಳನ್ನು ಮರುಪ್ಯಾಕ್ ಮಾಡಿ ನಕಲಿ ಲೇಬಲ್‌ಗಳೊಂದಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಆಗಸ್ಟ್‌ 18ರಂದು ರಾಮನಗರದಲ್ಲಿ ನಡೆದ ದಾಳಿ ವೇಳೆ ಸುಮಾರು ₹5 ಕೋಟಿ ಮೌಲ್ಯದ ನಕಲಿ ಔಷಧಿಗಳು ಪತ್ತೆಯಾಗಿದ್ದವು. ಇದೀಗ ಆರು ರಾಜ್ಯಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಜಾಲದ ಪ್ರಮುಖ ಆರೋಪಿ ಪ್ರಶಾಂತ್‌ಗಾಗಿ ಶೋಧ ಮುಂದುವರಿದಿದೆ.

Share News

About BigTv News

Check Also

ಮಂಗಳೂರು | ಮಾದಕ ವಸ್ತು ಸೇವನೆ ಮಾಡಿದ ಆರೋಪ: 9 ಮಂದಿ ಸೆರೆ

ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ಪೊಲೀಸರು ಒಟ್ಟು 9 …

Leave a Reply

Your email address will not be published. Required fields are marked *