Breaking News

ಪತಿಯಿಂದ ದೂರವಿದ್ದ ಮಹಿಳೆ ಹತ್ಯೆ ಶಂಕೆ: ಪ್ರಿಯಕರ ಶಬ್ಬೀರ್‌ ಫೋನ್‌ನೊಂದಿಗೆ ಪರಾರಿ!

ಚಿಕ್ಕಬಳ್ಳಾಪುರ: ತಾಲೂಕಿನ ಚೊಕ್ಕಹಳ್ಳಿ ಗ್ರಾಮದಲ್ಲಿ 28 ವರ್ಷದ ವಿವಾಹಿತೆ ಚೈತ್ರಾ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪತಿಯಿಂದ 8 ವರ್ಷಗಳಿಂದ ದೂರವಿದ್ದ ಆಕೆ ಇಬ್ಬರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಚೈತ್ರಾ ಶಬ್ಬೀರ್ ಎಂಬಾತನೊಂದಿಗೆ ಲಿವ್‌ಇನ್ ಸಂಬಂಧದಲ್ಲಿದ್ದು, ಇತ್ತೀಚೆಗೆ ಇಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಘಟನೆಯ ದಿನ ಶಬ್ಬೀರ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ ಎಂದು ಚೈತ್ರಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಬಳಿಕ ಮೊಬೈಲ್‌ ಫೋನ್‌ ಸಮೇತ ಪರಾರಿಯಾಗಿರುವ ಶಬ್ಬೀರ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಮಂಗಳೂರು | ಮಾದಕ ವಸ್ತು ಸೇವನೆ ಮಾಡಿದ ಆರೋಪ: 9 ಮಂದಿ ಸೆರೆ

ಮಂಗಳೂರು: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಡಿ ಪೊಲೀಸರು ಒಟ್ಟು 9 …

Leave a Reply

Your email address will not be published. Required fields are marked *