ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. ಮಸೀದಿ ಮುಂದೆ ಮೆರವಣಿಗೆ ಹಾಗೂ ಪಟಾಕಿ ಸಿಡಿಸದಂತೆ ಯುವಕರಿಗೆ ಅವರು ಸೂಚಿಸಿದ್ದಾರೆ. ಪೊಲೀಸರು ಸೂಚಿಸುವ ಮಾರ್ಗದಲ್ಲೇ ಮೆರವಣಿಗೆ ನಡೆಸಬೇಕು ಹಾಗೂ ನಿಗದಿತ ಮಾರ್ಗಕ್ಕೆ ಅನುಗುಣವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಇನ್ಸ್‌ಪೆಕ್ಟರ್ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಹೇಳಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

