Breaking News

ಮದುವೆಯಾಗುವಂತೆ ಪೀಡಿಸುತ್ತಿದ್ದ ಪ್ರೇಯಸಿಯ ಕೊಲೆ: ಮೂರು ತಿಂಗಳ ಬಳಿಕ ಆರೋಪಿ ಅರೆಸ್ಟ್

ಬೆಳಗಾವಿ: ನಾಲ್ಕು ವರ್ಷಗಳಿಂದ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಪ್ರೇಯಸಿ ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆರೋಪದ ಮೇಲೆ ದಿಲೀಪ್‌ನನ್ನು ಕುಲಗೋಡ ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣಳನ್ನು ಕೌಜಲಗಿಯ ಜಮೀನಿಗೆ ಕರೆದೊಯ್ದು ಕೊಲೆ ಮಾಡಿದ ಬಳಿಕ, ಆಕೆಯ 37 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್‌ ತೆಗೆದುಕೊಂಡು ದಿಲೀಪ್ ಪರಾರಿಯಾಗಿದ್ದ ಎನ್ನಲಾಗಿದೆ. ನಂತರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ತಲೆಮರೆಸಿಕೊಂಡಿದ್ದ. ಅನ್ನಪೂರ್ಣಳ ಮೊಬೈಲ್ ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ಅದನ್ನು ದಿಲೀಪ್ ತನ್ನ ಸ್ನೇಹಿತನಿಗೆ ಮಾರಿದ್ದನ್ನು ಪತ್ತೆಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಮಾಹಿತಿ ಆಧರಿಸಿ ಸ್ಥಳ ಪರಿಶೀಲನೆ ನಡೆಸಿದಾಗ ಮೃತದೇಹದ ಅವಶೇಷಗಳು ಹಾಗೂ ಸೀರೆ ಪತ್ತೆಯಾಗಿದ್ದು, ಡಿಎನ್‌ಎ ಪರೀಕ್ಷೆಗೆ ಕಳುಹಿಸಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *