Breaking News

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು ಅವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿತ್ತಗನೂರಿನ ಶಾಹಿನಾ ಬಾನು, ಆಕೆಯ ತಾಯಿ ಹಸೀನಾ ಹಾಗೂ ಪ್ರಿಯಕರ ನಹೀಮ್ ಉದ್ದೀನ್ ಖುರೇಶಿ ಬಂಧಿತರು. ಸೆ.9ರಂದು ತಾಯಿ-ಮಗಳು ಸೇರಿ ದಿಂಬಿನಿಂದ ಮುಬಾರಕ್‌ ಅವರ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ನಾಟಕವಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಅವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *