Breaking News

ಆಸ್ಪತ್ರೆಯಲ್ಲಿ ಪರ್ಸ್ ಕಳವು: 20ಕ್ಕೂ ಹೆಚ್ಚು ಕಳವು ಪ್ರಕರಣಗಳಿರುವ ಆರೋಪಿ ಬಂಧನ

ಕಾಸರಗೋಡು: ನುಳ್ಳಿಪ್ಪಾಡಿಯ ಖಾಸಗಿ ಆಸ್ಪತ್ರೆಯಲ್ಲಿ ರೋಗಿಯನ್ನು ನೋಡಿಕೊಳ್ಳುತ್ತಿದ್ದ ಮಹಿಳೆಯ ₹52 ಸಾವಿರ ಹಾಗೂ ದಾಖಲೆಗಳಿದ್ದ ಪರ್ಸ್ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಳಂಚೇರಿಮುಕ್ಕ ನಿವಾಸಿ ರಾಜೇಶ್ ಕುಮಾರ್ (30) ಬಂಧಿತ ಆರೋಪಿ. ಆಗಸ್ಟ್ 29ರಂದು ನಡೆದ ಕಳ್ಳತನದ ಬಗ್ಗೆ ದೂರು ದಾಖಲಾಗಿದ್ದು, ಆಸ್ಪತ್ರೆಯ ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಪತ್ತೆಹಚ್ಚಲಾಗಿದೆ. ರಾಜೇಶ್ ವಿರುದ್ಧ 20ಕ್ಕೂ ಹೆಚ್ಚು ಕಳವು ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಸರಗೋಡು ಟೌನ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *