ಹುಬ್ಬಳ್ಳಿ: ಗಣೇಶಮೂರ್ತಿ ಆಗಮನದ ಮೆರವಣಿಗೆ ವೇಳೆ ಕೆಲ ಕಿಡಿಗೇಡಿ ಯುವಕರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಮೆರವಣಿಗೆಯಲ್ಲಿ ಎರಡು ಗಣಪತಿ ಉತ್ಸವ ಸಮಿತಿಗಳು ಮುಖಾಮುಖಿಯಾದ ವೇಳೆ ಘಟನೆ ನಡೆದಿದೆ. ಯುವಕರನ್ನು ತಡೆಯಲು ಸಾರ್ವಜನಿಕರು ಮುಂದಾದಾಗ ಗಲಾಟೆ ಉಂಟಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಕಿಡಿಗೇಡಿಗಳನ್ನು ಚದುರಿಸಲಾಗಿದೆ. ಮಹಿಳೆಯರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಹಬ್ಬದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

