Breaking News

ಹಾವೇರಿ : ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ಕಿರುಕುಳ : ಮನನೊಂದ ಯುವಕ ಆತ್ಮಹತ್ಯೆಗೆ ಶರಣು!

ಹಾವೇರಿ: ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ನೇಣಿಗೆ ಶರಣಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಮಂಜುನಾಥ್ ಅಗಡಿ (24) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಎರಡು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದು, ಇತ್ತೀಚೆಗೆ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಮದುವೆ ವಿರೋಧಿಸಿದ್ದ ಯುವತಿಯ ಪೋಷಕರು ನಾಪತ್ತೆ ದೂರು ನೀಡಿದ್ದು, ವಿಚಾರಣೆ ಬಳಿಕ ಯುವತಿಯನ್ನು ಬಲವಂತವಾಗಿ ಮನೆಗೆ ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮಂಜುನಾಥ್ ಆತ್ಮಹತ್ಯೆಗೂ ಮುನ್ನ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿ ನೇಣಿಗೆ ಶರಣಾಗಿದ್ದಾನೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *