Breaking News

ಕಾರ್ಕಳ ಶಾಸಕರ ಬಗ್ಗೆ ಪ್ರಚೋದನಕಾರಿ ವಿಡಿಯೋ ಪೋಸ್ಟ್: ಆರೋಪಿ ಪೊಲೀಸ್ ವಶಕ್ಕೆ

ಕಾರ್ಕಳ: ಶಾಸಕ ಸುನೀಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಡಿ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರನ್ನು ಕೊಲೆ ಮಾಡಬೇಕು ಎಂಬ ರೀತಿಯಲ್ಲಿ ಪ್ರಚೋದನಕಾರಿ ವಿಡಿಯೋ ಸೃಷ್ಟಿಸಿ ಸಾರ್ವಜನಿಕರನ್ನು ಪ್ರಚೋದಿಸಲು ಯತ್ನಿಸಿದ್ದಾನೆ ಎಂದು ವಿಘೇಶ್ ಪ್ರಸಾದ್ ರಾವ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಡಿ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *