ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಯುವಕನೊಬ್ಬ ಪತ್ನಿಯನ್ನು ಪೋಷಕರು ಬಲವಂತವಾಗಿ ಕರೆದೊಯ್ದಿದ್ದರಿಂದ ಮನನೊಂದು ನೇಣಿಗೆ ಶರಣಾದ ಘಟನೆ ನಗರದ ದೇವದಾರ್ ಏರಿಯಾದಲ್ಲಿ ನಡೆದಿದೆ. ಮಂಜುನಾಥ್ ಅಗಡಿ (24) ಮೃತ ಯುವಕ. ಎರಡು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಮಂಜುನಾಥ್, ಇತ್ತೀಚೆಗೆ ಸ್ಥಳೀಯ ದೇವಸ್ಥಾನವೊಂದರಲ್ಲಿ ಗುಟ್ಟಾಗಿ ಮದುವೆಯಾಗಿದ್ದ. ಆದರೆ ಯುವತಿ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿ, ಮಹಿಳಾ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ಬಳಿಕ ಯುವತಿಯ ಪೋಷಕರು ಆಕೆಯನ್ನು ಮನೆಗೆ ಕರೆದೊಯ್ದಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮಂಜುನಾಥ್, ‘ಮುಂದಿನ ಜನ್ಮ ಅಂತಿದ್ರೆ ನಾನು ನಿನ್ನವನಾಗಿ ಹುಟ್ಟಿ ಬರುವೆ’ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

