ಮೈಸೂರು: ಇ-ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ ₹50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಲಯ ಕಚೇರಿ-2ರ ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಡಿ.ಎಂ. ಮಂಜುನಾಥ್ ಅಮಾನತುಗೊಂಡಿದ್ದಾರೆ. ಗೂಗಲ್ ಪೇ ಮೂಲಕ ಹಣ ಪಡೆದಿದ್ದು, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ವಾರ್ಡ್ 62ರ ನಿವಾಸಿ ಪವಿತ್ರ ಇ-ಖಾತೆಗಾಗಿ ಅರ್ಜಿ ಸಲ್ಲಿಸಿದ್ದರು. ಎರಡು ತಿಂಗಳಾದರೂ ಖಾತೆ ಮಾಡಿಕೊಡದೆ ಸತಾಯಿಸಿದ್ದ ಮಂಜುನಾಥ್, ವಕೀಲ ಲೋಕೇಶ್ ಬಳಿ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ ₹50 ಸಾವಿರ ಗೂಗಲ್ ಪೇ ಮೂಲಕ ಪಾವತಿಸಲಾಗಿತ್ತು. ಉಳಿದ ₹50 ಸಾವಿರಕ್ಕೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಲೋಕೇಶ್ ದಾಖಲೆಗಳ ಸಮೇತ ದೂರು ಸಲ್ಲಿಸಿದ್ದರು. ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ. ಸವಿತಾ ಅವರು ಮಂಜುನಾಥ್ ಅಮಾನತಿಗೆ ಆದೇಶ ಹೊರಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
