Breaking News

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಿಗೆ ಜೀವ ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಗೂ ‘ತಲೆ ಬೇಕು’ ಎಂಬ ಅರ್ಥ ಬರುವಂತೆ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪೋಸ್ಟ್ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಹಾಕಿದ ಹಿನ್ನೆಲೆ ಹಾಗೂ ಉದ್ದೇಶದ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

Share News

About BigTv News

Check Also

ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್, ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ!

ಮೈಸೂರು: ಇ-ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ ₹50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಲಯ ಕಚೇರಿ-2ರ ಪ್ರಥಮ ದರ್ಜೆ …

Leave a Reply

Your email address will not be published. Required fields are marked *