ಬಳ್ಳಾರಿ: ಕೌಟುಂಬಿಕ ಕಲಹದಿಂದ ನೊಂದ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯ ಎದುರಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿ ಆತಂಕ ಸೃಷ್ಟಿಸಿದ ಘಟನೆ ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡರಗಿ ನಿವಾಸಿ ಇಸ್ಮಾಯಿಲ್, ಪತ್ನಿಯೊಂದಿಗೆ ಠಾಣೆಗೆ ಬಂದಿದ್ದರು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ನೊಂದ ಇಸ್ಮಾಯಿಲ್ ಏಕಾಏಕಿ ಠಾಣೆಯಿಂದ ಹೊರಗೆ ಓಡಿ ಟ್ರಾನ್ಸ್‌ಫಾರ್ಮರ್ ಏರಿದ್ದಾರೆ. ಇದರಿಂದ ಪೊಲೀಸರು ಹಾಗೂ ಸ್ಥಳೀಯರು ಆತಂಕಗೊಂಡಿದ್ದರು. ಪೊಲೀಸರು ಸಾಕಷ್ಟು ಸಮಯ ಮನವೊಲಿಸಿ ಇಸ್ಮಾಯಿಲ್ ಅವರನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
