Breaking News

ಚಾಕೊಲೇಟ್ ಆಸೆ ತೋರಿಸಿ 6 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ: 60 ವರ್ಷದ ವೃದ್ಧ ಅರೆಸ್ಟ್

ಮಹಾರಾಷ್ಟ್ರ: ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 60 ವರ್ಷದ ದಿನೇಶ್ ಸುವರ್ಣಕರ್ ಎಂಬಾತನನ್ನು ಜಾಲ್ನಾ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಕೃತ್ಯ ಎಸಗಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಬಳಿಕ ಬಾಲಕಿ ತಾಯಿಗೆ ವಿಷಯ ತಿಳಿಸಿದ್ದು, ಅದೇ ರಾತ್ರಿ ದೂರು ದಾಖಲಿಸಲಾಗಿದೆ. ಪೋಕ್ಸೊ ಸೇರಿದಂತೆ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ಖಂಡಿಸಿ ಜಾಲ್ನಾದಲ್ಲಿ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕ ಕೈಲಾಸ್ ಗೋರಂಟ್ಯಾಲ್ ನೇತೃತ್ವದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.

Share News

About BigTv News

Check Also

ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್, ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ!

ಮೈಸೂರು: ಇ-ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ ₹50 ಸಾವಿರ ಲಂಚ ಪಡೆದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಲಯ ಕಚೇರಿ-2ರ ಪ್ರಥಮ ದರ್ಜೆ …

Leave a Reply

Your email address will not be published. Required fields are marked *