ದಾವಣಗೆರೆ: ಬೀಡಿ ಲೇಔಟ್‌ನಲ್ಲಿ ಸೆ.6ರ ತಡರಾತ್ರಿ ಎರಡು ಕುಟುಂಬಗಳ ನಡುವೆ ನಡೆದಿದ್ದ ಗಲಭೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಹುಸೇನ್ (23) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ನಡೆದ ಮಾರಾಮಾರಿಯಲ್ಲಿ ಐವರು ಗಾಯಗೊಂಡಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದ ಹುಸೇನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಮೆದುಳಿಗೆ ಗಂಭೀರ ಹಾನಿಯಾಗಿದ್ದರಿಂದ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಆಜಾದ್ ನಗರ ಠಾಣೆಯಲ್ಲಿ 15ಕ್ಕೂ ಹೆಚ್ಚು ಜನರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಮೃತದೇಹ ದಾವಣಗೆರೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೀಡಿ ಲೇಔಟ್‌ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
