ತುಮಕೂರು: ಪಾವಗಡ ತಾಲೂಕಿನ ಕನಿಕಲಬಂಡೆ ಹಾಗೂ ಸುತ್ತಮುತ್ತಲಿನ ಬೆಟ್ಟಗುಡ್ಡಗಳಲ್ಲಿ ಶಂಕಿತ ನಕ್ಸಲ್ ನಾಯಕ ಉಪ್ಪಾರ ವೆಂಕಟೇಶ್‌ಗಾಗಿ ಪೊಲೀಸರು ಬೃಹತ್ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ರೈತರ ಜಮೀನಿನ ಗೇಟ್‌ಗೆ ನಕ್ಸಲ್ ಸಂಘಟನೆ ಹೆಸರಿನಲ್ಲಿ ಪತ್ರ ಅಂಟಿಸಿ ₹5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ಬಳಿಕ ಕಾರ್ಯಾಚರಣೆ ಆರಂಭಿಸಲಾಗಿದೆ. ತುಮಕೂರು ಹೆಚ್ಚುವರಿ ಎಸ್ಪಿ ಗೋಪಾಲ್ ಹಾಗೂ ಮಧುಗಿರಿ ಡಿವೈಎಸ್‌ಪಿ ಮಂಜುನಾಥ್ ನೇತೃತ್ವದಲ್ಲಿ ಐದು ವಿಶೇಷ ತಂಡಗಳ 120ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಎಕೆ-47 ಸೇರಿದಂತೆ ಶಸ್ತ್ರಾಸ್ತ್ರಗಳೊಂದಿಗೆ 12 ಕಿ.ಮೀ. ವ್ಯಾಪ್ತಿಯಲ್ಲಿ ಶೋಧ ನಡೆಸಲಾಗಿದ್ದು, ಡ್ರೋನ್ ಕ್ಯಾಮರಾ ಮೂಲಕವೂ ಕಾರ್ಯಾಚರಣೆ ಮುಂದುವರಿಸಲಾಗಿದೆ. ಕನಿಕಲಬಂಡೆ, ಪಳವಳ್ಳಿ ಕಡಪಲಕೆರೆ, ವೀರಮ್ಮನಹಳ್ಳಿ, ಗಂಗಾಸಾಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದರೂ ಶಂಕಿತ ನಕ್ಸಲ್‌ನ ಯಾವುದೇ ಸುಳಿವು ಪತ್ತೆಯಾಗಿಲ್ಲ. ಪತ್ರ ಅಂಟಿಸಿದವರು ಯಾರು ಎಂಬುದೂ ಇನ್ನೂ ತಿಳಿದುಬಂದಿಲ್ಲ. ಕಾರ್ಯಾಚರಣೆ ಮುಂದುವರಿದಿದ್ದು, ವಿಶೇಷ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

