Breaking News

8 ನೇ ತರಗತಿ ವಿದ್ಯಾರ್ಥಿಗೆ ಸತತ ಬೆದರಿಕೆ – 6 ಲಕ್ಷ ಹಣ, 150 ಗ್ರಾಂ ಚಿನ್ನ ಸುಲಿಗೆ!

ಬೆಂಗಳೂರು: ಟಿ. ದಾಸರಹಳ್ಳಿ ವ್ಯಾಪ್ತಿಯಲ್ಲಿ 8ನೇ ತರಗತಿ ಓದುತ್ತಿದ್ದ 14 ವರ್ಷದ ವಿದ್ಯಾರ್ಥಿಗೆ ಬೆದರಿಕೆ ಹಾಕಿ ₹6 ಲಕ್ಷ ನಗದು ಹಾಗೂ ಸುಮಾರು 150 ಗ್ರಾಂ ಚಿನ್ನಾಭರಣ ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಗಲಗುಂಟೆ ಠಾಣೆಯಲ್ಲಿ 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕಾಶ್‌, ಸಾಗರ್‌, ತರುಣ್‌, ವೀರೇಶ್‌, ಶಂಕರ್‌, ದಿಗಂತ್‌, ಲಿಖಿತ್‌, ಪ್ರಜ್ವಲ್‌, ನಾಗರಾಜು ಮತ್ತು ಪ್ರಶಾಂತ್‌ ಆರೋಪಿಗಳೆಂದು ತಿಳಿದುಬಂದಿದೆ. ಕೆಲ ದಿನಗಳಿಂದ ಬಾಲಕನೊಂದಿಗೆ ಸ್ನೇಹ ಬೆಳೆಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಹಾಳು ಮಾಡಿದ್ದಾನೆಂದು ಆರೋಪಿಸಿ ಬೆದರಿಕೆ ಹಾಕಿ ಮನೆಯಲ್ಲಿದ್ದ ಹಣ ಹಾಗೂ ಚಿನ್ನ ತರುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಬೆದರಿಕೆಗೆ ಹೆದರಿದ ಬಾಲಕ ಹಣ ಮತ್ತು ಆಭರಣಗಳನ್ನು ಆರೋಪಿಗಳಿಗೆ ನೀಡಿದ್ದಾನೆ. ಬಳಿಕ ಮನೆಯಲ್ಲಿ ನಗದು ಹಾಗೂ ಚಿನ್ನ ಕಾಣೆಯಾಗಿರುವುದು ಕುಟುಂಬದ ಗಮನಕ್ಕೆ ಬಂದಿದ್ದು, ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *