ಆನೇಕಲ್: ಮನೆಯ ಮುಂದೆ ನಿಲ್ಲಿಸಿದ್ದ ಬೆಲೆಬಾಳುವ ಬೈಕ್‌ನ್ನು ಕಳ್ಳರು ಕ್ಷಣಮಾತ್ರದಲ್ಲಿ ಕದ್ದು ಪರಾರಿಯಾದ ಘಟನೆ ಆನೇಕಲ್ ಪಟ್ಟಣದ ಅತ್ತಿಬೆಲೆ ಮುಖ್ಯರಸ್ತೆಯಲ್ಲಿ ನಡೆದಿದೆ. ರಾತ್ರಿ ವೇಳೆ ಜನರು ನಿದ್ರೆಗೆ ಜಾರಿದ್ದ ಸಂದರ್ಭದಲ್ಲಿ ಕಳ್ಳರು ಬೈಕ್‌ನ್ನು ಕದ್ದಿದ್ದಾರೆ. ಕಳ್ಳತನದ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮಾಲೀಕರು ನೀಡಿದ ದೂರಿನ ಮೇರೆಗೆ ಆನೇಕಲ್ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

