Breaking News

ಬ್ಯಾಟ್ ನಿಂದ ಬಾಸುಂಡೆ ಬರುವಂತೆ ಥಳಿತ – ಗಣೇಶೋತ್ಸವಕ್ಕೆ ಅವಾಜ್ ಹಾಕಿದ್ದ ಪೊಲೀಸ್ ಗೂಂಡಾ ಕೃತ್ಯ ಬಯಲು!

ಮೈಸೂರು: ಗಣೇಶೋತ್ಸವ ವಿಚಾರದಲ್ಲಿ ಯುವಕರಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾದ ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಅವರ ವಿರುದ್ಧ ಈ ಹಿಂದೆ ಕೇಳಿಬಂದಿದ್ದ ಹಲ್ಲೆ ಹಾಗೂ ದೌರ್ಜನ್ಯದ ಆರೋಪಗಳು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿವೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಕೌಟುಂಬಿಕ ಕಲಹದ ವಿಚಾರವಾಗಿ ಠಾಣೆಗೆ ಕರೆಸಲಾಗಿದ್ದ ನಾಲ್ವರು ದಲಿತ ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಧನಂಜಯ್ ವಿರುದ್ಧ ಕೇಳಿಬಂದಿತ್ತು. ಹಲ್ಲೆಗೆ ಬಳಸಲಾಗಿದೆ ಎನ್ನಲಾದ ಬ್ಯಾಟ್ ಹಾಗೂ ಗಾಯಗೊಂಡ ಯುವಕರ ಫೋಟೋಗಳು ಇದೀಗ ಮತ್ತೆ ವೈರಲ್ ಆಗಿವೆ. ಈ ಸಂಬಂಧ ಯುವಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದರು ಎನ್ನಲಾಗಿದ್ದು, ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿದ್ದವು. ಇದೀಗ ಗಣೇಶೋತ್ಸವದ ಘಟನೆ ಹಿನ್ನೆಲೆಯಲ್ಲಿ ಹಳೆಯ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ, ಆರೋಪಗಳು ಸತ್ಯವಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *