ಬೆಂಗಳೂರು: ಯಲಹಂಕ ಬಳಿಯ ಅಟ್ಟೂರು ಗ್ರಾಮದಲ್ಲಿ ರಸ್ತೆಬದಿ ಹೂವಿನ ವ್ಯಾಪಾರ ಮಾಡುತ್ತಿದ್ದ ಮನೋಜ್ ಹಾಗೂ ಮೂರು ತಿಂಗಳ ಬಾಣಂತಿ ನಳಿನಾ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಹಾಗೂ ಕಾಶಿ ವಿಶ್ವನಾಥ ದೇವಸ್ಥಾನದ ಅಧ್ಯಕ್ಷ ವರದರಾಜು ಮತ್ತು ಆತನ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವಿಚಾರಕ್ಕೆ ಕಿರಿಕ್ ತೆಗೆದು ಮನೋಜ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ವರದರಾಜು, ಬಿಡಿಸಲು ಬಂದ ನಳಿನಾ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಸಂತ್ರಸ್ತರು ಸಿಸಿಟಿವಿ ದೃಶ್ಯಗಳ ಸಮೇತ ಯಲಹಂಕ ಉಪನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

