ಮೈಸೂರು: ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ಕುರಿತು ಇನ್‌ಸ್ಪೆಕ್ಟರ್ ಧನಂಜಯ ನೀಡಿದ್ದ ವಿವಾದಾತ್ಮಕ ಹೇಳಿಕೆ ರಾಜಕೀಯ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಅವರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸುತ್ತಿರುವ ಬೆನ್ನಲ್ಲೇ, ಅವರ ವಿರುದ್ಧದ ಹಳೆಯ ಆರೋಪಗಳು ಮತ್ತೆ ಚರ್ಚೆಗೆ ಬಂದಿವೆ. 2012ರಲ್ಲಿ ಬೆಂಗಳೂರಿನಲ್ಲಿ ತನಿಖೆ ನಡೆಸುತ್ತಿದ್ದ ವೇಳೆ ದೆಹಲಿ ಮೂಲದ ಯುವತಿಗೆ ವಿವಾಹದ ವಿಚಾರ ಮುಚ್ಚಿಟ್ಟು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಧನಂಜಯ ವಿರುದ್ಧ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. 2014ರಲ್ಲಿ ಅವರನ್ನು ಬಂಧಿಸಲು ದೆಹಲಿ ಪೊಲೀಸರು ಬಂದಾಗ ಎಂಟು ದಿನಗಳ ಕಾಲ ನಾಪತ್ತೆಯಾಗಿದ್ದರು ಎಂಬ ಆರೋಪವೂ ಇದೆ. ಕಳೆದ ವರ್ಷ ನಾಲ್ವರು ದಲಿತ ಯುವಕರನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೂ ಅವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಸಿಎಂಗೆ ದೂರು ನೀಡಲಾಗಿದ್ದು, ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತ್ತು ಎನ್ನಲಾಗಿದೆ. ಇದೀಗ ಹಳೆಯ ಆರೋಪಗಳ ಕುರಿತು ಸಮಗ್ರ ತನಿಖೆಗೆ ಆಗ್ರಹ ಕೇಳಿಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

