ಮೈಸೂರು: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದ ಯುವಕರಿಗೆ ಧಮ್ಕಿ ಹಾಕಿದ್ದಾರೆ ಎನ್ನಲಾದ ಟಿ. ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ವಿರುದ್ಧದ ಹಳೆಯ ಪ್ರಕರಣವೊಂದು ಮತ್ತೆ ಚರ್ಚೆಗೆ ಬಂದಿದೆ. 2014ರಲ್ಲಿ ದೆಹಲಿ ಮೂಲದ ಮಾಡೆಲ್‌ವೊಬ್ಬರು ಧನಂಜಯ್ ವಿರುದ್ಧ ಅತ್ಯಾಚಾರದ ಆರೋಪದಡಿ ದೂರು ದಾಖಲಿಸಿದ್ದರು ಎನ್ನಲಾಗಿದೆ. ಆ ವೇಳೆ ಧನಂಜಯ್ ಬೆಂಗಳೂರಿನ ಇಂದಿರಾನಗರ ಠಾಣೆಯಲ್ಲಿ ಪಿಎಸ್‌ಐ ಆಗಿದ್ದರು. ಪ್ರಕರಣದ ತನಿಖೆಯ ವೇಳೆ ಪರಿಚಯವಾದ ಮಾಡೆಲ್ ಜೊತೆ ಪ್ರೇಮ ಸಂಬಂಧ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬಳಿಕ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಾಡೆಲ್ ದೆಹಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಧನಂಜಯ್‌ರನ್ನು ಬಂಧಿಸಲು ದೆಹಲಿ ಪೊಲೀಸರು ಬೆಂಗಳೂರಿಗೆ ಬಂದಾಗ ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಇದೀಗ ಗಣೇಶೋತ್ಸವ ವಿವಾದದ ಬೆನ್ನಲ್ಲೇ ಈ ಹಳೆಯ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಧನಂಜಯ್ ವಿರುದ್ಧದ ಆರೋಪಗಳ ಕುರಿತು ಚರ್ಚೆ ತೀವ್ರಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

