Breaking News

17 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ ಪ್ರಕರಣ – ಇಬ್ಬರು ಕಾಮಾಂಧರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!

ಬೆಂಗಳೂರು: 2017ರಲ್ಲಿ ಹದಿಹರೆಯದ ಬಾಲಕಿಯನ್ನು ಅಪಹರಿಸಿ ಸರಣಿ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ತ್ವರಿತಗತಿ ವಿಶೇಷ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ರಾಘವೇಂದ್ರ ಹಾಗೂ ಸಾಗರ್‌ಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹20 ಸಾವಿರ ದಂಡ ವಿಧಿಸಲಾಗಿದೆ. 2017ರ ಅಕ್ಟೋಬರ್‌ನಲ್ಲಿ ವೈಟ್‌ಫೀಲ್ಡ್ ರೈಲು ನಿಲ್ದಾಣದ ಬಳಿ ಸ್ನೇಹಿತೆಯ ಹೆಸರಿನಲ್ಲಿ ಬಾಲಕಿಯನ್ನು ಪುಸಲಾಯಿಸಿ ಲಾಡ್ಜ್‌ಗೆ ಕರೆದೊಯ್ದ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಬಳಿಕ ಬಾಲಕಿಯನ್ನು 10 ದಿನಗಳ ಕಾಲ ಕೊಠಡಿಯಲ್ಲಿ ಬಂಧಿಸಿಟ್ಟು, ಕೊಲೆ ಮಾಡುವುದಾಗಿ ಬೆದರಿಸಿ ಪದೇ ಪದೇ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ. ಬಾಲಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ತಂದೆ ಕಾಡುಗೋಡಿ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತೆಗೆ ₹7 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದು, ಪ್ರಕರಣದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *