ಕುಮಟಾ: ಪಟ್ಟಣದಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಓರ್ವ ಆರೋಪಿಯನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ. ರಸ್ತೆಬದಿ ಮಲಗಿದ್ದ ಗೋವನ್ನು ಇಬ್ಬರು ವ್ಯಕ್ತಿಗಳು ಕಾರಿನ ಡಿಕ್ಕಿಗೆ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗೋವಿಗೆ ತಿನಿಸು ನೀಡಿ ಬಳಿಕ ಹಗ್ಗದಿಂದ ಎಳೆದುಕೊಂಡು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು 60ಕ್ಕೂ ಅಧಿಕ ಸಿಸಿಟಿವಿ ಪರಿಶೀಲಿಸಿ, ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಮಂಗಳೂರು ಬೈಕಂಪಾಡಿ ನಿವಾಸಿ ಮಹಮ್ಮದ್ ಶಚೀರ ಸಮೀರ ಗುರ್ಕಾನನ್ನು ಬಜಪೆಯಲ್ಲಿ ಬಂಧಿಸಿದ್ದಾರೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ಮಾರುತಿ ಸುಜುಕಿ ಎರ್ಟಿಗಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಮಹಮ್ಮದ್ ಅಜೀಮ್ ಸಾಬ್ ಹಾಗೂ ಜುಲ್ಫಾನ್ ಮಾಲಿಕ್ ಸಾಬ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
