Breaking News

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ ದೊಣ್ಣೆಗಳಿಂದ ಹಲ್ಲೆ ನಡೆಸಿದ ಆರೋಪದಡಿ 13 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 6 ಆರೋಪಿಗಳನ್ನು ಬಂಧಿಸಿದ್ದಾರೆ. ಅಮಾವಾಸ್ಯೆ ಜಾತ್ರೆ ಮುಗಿಸಿ ಭಕ್ತರು ಆಟೋದಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಆಟೋ ಸ್ಥಳೀಯ ಬಾಲಕನಿಗೆ ತಾಗಿದ್ದರಿಂದ ಮಾತಿನ ಚಕಮಕಿ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಎರಡೂ ಗುಂಪುಗಳ ನಡುವೆ ಹಲ್ಲೆ ನಡೆದಿದೆ. ಘಟನೆಯಲ್ಲಿ ಎರಡೂ ಕಡೆಯವರಿಗೂ ಗಾಯಗಳಾಗಿದ್ದು, ಐವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಲಾಗಿದೆ ಎಂದು ಯುವತಿ ಆರೋಪಿಸಿದ್ದಾರೆ. ಸಂತ್ರಸ್ತರ ದೂರಿನ ಆಧಾರದ ಮೇಲೆ ಅಟ್ರಾಸಿಟಿ ಹಾಗೂ ಹಲ್ಲೆ ಪ್ರಕರಣ ದಾಖಲಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಎಸ್ಪಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

Share News

About BigTv News

Check Also

ಗೋ ಕಳ್ಳತನ ಮಾಡುತ್ತಿದ್ದ ಆರೋಪಿ ಸೆರೆ

ಕುಮಟಾ: ಪಟ್ಟಣದಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಓರ್ವ ಆರೋಪಿಯನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ. ರಸ್ತೆಬದಿ …

Leave a Reply

Your email address will not be published. Required fields are marked *