Breaking News

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ತನ್ನ ಚಿಕ್ಕಪ್ಪನಿಗೆ ಚಾಕು ಇರಿದಿದ್ದಾನೆ. ಶ್ರೀನಿವಾಸ್ (52) ಗಾಯಗೊಂಡಿದ್ದು, ಅವರ ಸೋದರ ಸಂಬಂಧಿ ಮಂಜುನಾಥ್ ವಿರುದ್ಧ ಆರೋಪ ಕೇಳಿಬಂದಿದೆ. ರಾಜಪ್ಪ ಹಾಗೂ ಶ್ರೀನಿವಾಸ್ ಕುಟುಂಬಗಳ ನಡುವೆ ಕೆಲ ದಿನಗಳಿಂದ ವಿವಾದವಿತ್ತು. ಇದೇ ವಿಚಾರವಾಗಿ ಗಲಾಟೆ ನಡೆದ ವೇಳೆ ಕಾರಿನಲ್ಲಿ ಬಂದ ಮಂಜುನಾಥ್ ಚಾಕುವಿನಿಂದ ಶ್ರೀನಿವಾಸ್ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಬಿಡಿಸಲು ಬಂದ ಶ್ರೀನಿವಾಸ್ ಪತ್ನಿ ಶಶಿಕಲಾ ಮೇಲೂ ಹಲ್ಲೆ ನಡೆದಿದೆ. ಚಾಕು ಇರಿತದಿಂದ ಶ್ರೀನಿವಾಸ್ ಎದೆ, ಪಕ್ಕೆಲುಬು ಹಾಗೂ ತೊಡೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಗೋ ಕಳ್ಳತನ ಮಾಡುತ್ತಿದ್ದ ಆರೋಪಿ ಸೆರೆ

ಕುಮಟಾ: ಪಟ್ಟಣದಲ್ಲಿ ನಡೆದ ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮೂಲದ ಓರ್ವ ಆರೋಪಿಯನ್ನು ಕುಮಟಾ ಪೊಲೀಸರು ಬಂಧಿಸಿದ್ದಾರೆ. ರಸ್ತೆಬದಿ …

Leave a Reply

Your email address will not be published. Required fields are marked *