Breaking News

ಗಣೇಶ ಚತುರ್ಥಿ ದಿನವೇ ಭಾರೀ ದುರಂತ; ಒಂದೇ ಕುಟುಂಬದ ನಾಲ್ವರು ಸಜೀವ ದಹನ! ಅಸಲಿಗೆ ಆಗಿದ್ದೇನು?

ಬೆಳಗಾವಿಯ ಚಾವ್ಹಾಟ್ ಗಲ್ಲಿಯಲ್ಲಿ ಗಣೇಶ ಹಬ್ಬದ ದಿನವೇ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಮೃತಪಟ್ಟಿದ್ದಾರೆ. ಪ್ರಿಯಾ (28) ಹಾಗೂ ಗಂಗಾ (25) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಹಾಡಹಗಲೇ ಜಿಮ್ ತರಬೇತುದಾರನ ಮರ್ಡರ್! 20 ಸುತ್ತು ಗುಂಡು ಹಾರಿಸಿ ಕೊಲೆಗೈದ ದುಷ್ಕರ್ಮಿಗಳು!

ನವದೆಹಲಿ: ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಜಿಮ್ ತರಬೇತುದಾರನನ್ನು ದುಷ್ಕರ್ಮಿಗಳು ಸುಮಾರು 20 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. …

Leave a Reply

Your email address will not be published. Required fields are marked *