Breaking News

ದೇವಸ್ಥಾನಕ್ಕೆ ಬಂದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ!

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದ ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಚಾಮನಾಳ ಗ್ರಾಮದ ದಲಿತ ಭಕ್ತರ ಮೇಲೆ ದೊಣ್ಣೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ವೇಳೆ ಜಾತಿ ನಿಂದನೆ ಹಾಗೂ ಕೊಲೆಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ 14 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Share News

About BigTv News

Check Also

ಹಾಡಹಗಲೇ ಜಿಮ್ ತರಬೇತುದಾರನ ಮರ್ಡರ್! 20 ಸುತ್ತು ಗುಂಡು ಹಾರಿಸಿ ಕೊಲೆಗೈದ ದುಷ್ಕರ್ಮಿಗಳು!

ನವದೆಹಲಿ: ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಜಿಮ್ ತರಬೇತುದಾರನನ್ನು ದುಷ್ಕರ್ಮಿಗಳು ಸುಮಾರು 20 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. …

Leave a Reply

Your email address will not be published. Required fields are marked *