ಬೆಳಗಾವಿಯ ಚವ್ಹಾಣಗಲ್ಲಿಯಲ್ಲಿ ಗಣೇಶೋತ್ಸವದ ನಡುವೆಯೇ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಗಜಾನನ ದಮೋನೆ (65), ರೋಷನ (21), ಶಾರಧಾ (45) ಹಾಗೂ ಭಾರತಿ (50) ಮೃತಪಟ್ಟಿದ್ದಾರೆ. ಪ್ರಿಯಾ (28) ಹಾಗೂ ಗಂಗಾ (25) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಇಡೀ ಮನೆಗೆ ವ್ಯಾಪಿಸಿದೆ ಎನ್ನಲಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
