ಚಾಮರಾಜನಗರ: ಗುಂಡ್ಲುಪೇಟೆಯಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರದ ಗಾಳೀಪುರ ನಿವಾಸಿ ಅಬೀವುಲ್ಲಾ ಬಂಧಿತ ಆರೋಪಿ. ಆತನಿಂದ ₹1.20 ಲಕ್ಷ ಮೌಲ್ಯದ 1,200 ಲಾಟರಿ ಟಿಕೆಟ್‌ಗಳನ್ನು ಜಪ್ತಿ ಮಾಡಲಾಗಿದೆ. ಮಾಹಿತಿ ಆಧರಿಸಿ ಗುಂಡ್ಲುಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

