Breaking News

ಬೆಂಗಳೂರು : ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಭೀಕರ ಕೊಲೆ

ಬೆಂಗಳೂರು, ಸೆ.15- ಯಾವುದೋ ವಿಚಾರಕ್ಕೆ ಯುವಕನೊಂದಿಗೆ ಜಗಳವಾಡಿದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ಕೂಲಿಕಾರ್ಮಿಕ ಮಹೇಶ್ (18) ಎಂದು ಗುರುತಿಸಲಾಗಿದೆ. ರಾಮಟೆಂಟ್ ರಸ್ತೆಯ ಬದಿ ಮಲಗಿದ್ದ ಮಹೇಶ್‌ನೊಂದಿಗೆ ರಾತ್ರಿ 11ರ ಸುಮಾರಿಗೆ ದುಷ್ಕರ್ಮಿಗಳು ಜಗಳವಾಡಿದ್ದಾರೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳಗ್ಗೆ 6ರ ಸುಮಾರಿಗೆ ಸ್ಥಳೀಯರು ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೆಜೆ ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಕೊಲೆಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *