ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ಗುಂಪು ಹಲ್ಲೆ ನಡೆಸಿರುವ ಘಟನೆ ಜೇವರ್ಗಿ ತಾಲೂಕಿನ ಮಯೂರ ಗ್ರಾಮದಲ್ಲಿ ನಡೆದಿದೆ. ಮಯೂರ ಗ್ರಾಮದ ಗುರುರಾಜ್ ಬಿರಾದರ್ (18) ಹಲ್ಲೆಗೊಳಗಾದ ಯುವಕ. ಗುರುರಾಜ್ ಒಂಟಿಯಾಗಿ ಸಿಕ್ಕ ವೇಳೆ ಶ್ರೀಶೈಲ್, ಅಜಯಕುಮಾರ್, ಮುತ್ತುರಾಜ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಏಕಾಏಕಿ ದಾಳಿ ನಡೆಸಿ, ನೆಲಕ್ಕೆ ಕೆಡವಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಗುರುರಾಜ್ ನೀಡಿದ ದೂರಿನ ಮೇರೆಗೆ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆಗೆ ನಿಖರ ಕಾರಣ ಹಾಗೂ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧದ ಕ್ರಮದ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

