Breaking News

ಗಾಂಜಾ ಮಾರಾಟ: ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಬಂಧನ

ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಬಂದಿದ್ದ ಆರೋಪದ ಮೇಲೆ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ ಸೋಮಶೇಖರ ಅಲಿಯಾಸ್‌ ಡೆಡ್ಲಿ ಸೋಮ (30)ನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.11ರಂದು ಕಾರ್ಯಾಚರಣೆ ನಡೆಸಿ ಸೋಮಶೇಖರನನ್ನು ಬಂಧಿಸಿದ್ದು, ಆತನಿಂದ ₹1 ಲಕ್ಷ ಮೌಲ್ಯದ 2 ಕೆ.ಜಿ. 64 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ಪಾಂಡುರಂಗ ಮಾರ್ಗದರ್ಶನದಲ್ಲಿ ನಗರ ಠಾಣೆ ಪ್ರಭಾರ ಇನ್‌ಸ್ಪೆಕ್ಟರ್ ಎಚ್‌. ಮುತ್ತುರಾಜು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *