ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್ ರಾವ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಜೈಲಿನಿಂದ ಬಿಡುಗಡೆಯಾಗಿದ್ದ ಕೈದಿ ವಿಷ್ಣುವರ್ಧನ್ ಹೆಸರಿನಲ್ಲಿ ಮೊಬೈಲ್ ಸಂಖ್ಯೆ ನೋಂದಾಯಿಸಿಕೊಂಡು ಪತ್ನಿಗೆ ಕರೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಪ್ರದೂಷ್ ರಾವ್ ಜೈಲಿನಲ್ಲಿ ಮೂರು ಮೊಬೈಲ್ ಸಂಖ್ಯೆಗಳನ್ನು ನೋಂದಾಯಿಸಿಕೊಂಡಿದ್ದರು. ಬಳಿಕ ಆಗಸ್ಟ್ 26ರಂದು ಬಿಡುಗಡೆಯಾದ ವಿಷ್ಣುವರ್ಧನ್ ಹೆಸರಿನಲ್ಲೂ ಮತ್ತೊಂದು ಸಂಖ್ಯೆ ನೋಂದಾಯಿಸಿಕೊಂಡು ಪತ್ನಿಯೊಂದಿಗೆ ಮಾತನಾಡಿರುವುದು ಪತ್ತೆಯಾಗಿದೆ. ಪತ್ನಿಯ ಸಂಖ್ಯೆಯನ್ನು ವಕೀಲರ ಹೆಸರಿನಲ್ಲಿ ನೋಂದಾಯಿಸಿಕೊಂಡಿರುವುದೂ ಬೆಳಕಿಗೆ ಬಂದಿದೆ. ಈ ಕೃತ್ಯಕ್ಕೆ ಜೈಲಿನ ವೀಕ್ಷಕ ಮೌನೇಶ್ ಎಚ್. ಕೋರಿ ಸಹಕಾರ ನೀಡಿರುವುದು ಪತ್ತೆಯಾಗಿದೆ ಎಂದು ಜೈಲು ಅಧೀಕ್ಷಕ ಬಿ.ಎಂ. ಕೊಟ್ರೇಶ್ ಅವರು ಜೈಲರ್ ಎಲ್. ಉಮಾಶಂಕರ್ ಮೂಲಕ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

