ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಜಂಟಿ ದಾಳಿಯಲ್ಲಿ ಸುಮಾರು 10 ಟನ್ ರಾಸಾಯನಿಕ ಮಿಶ್ರಿತ ಹಾಗೂ ಕೃತಕ ಬಣ್ಣ ಬಳಿದ ಅಡಿಕೆಯನ್ನು ಜಪ್ತಿ ಮಾಡಿದ್ದಾರೆ. ಮುಳಬಾಗಿಲು ಟಿಎಚ್‌ಒ ಡಾ. ಸುಗುಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಅಡಿಕೆಯಲ್ಲಿ ಕಲರಿಂಗ್ ಏಜೆಂಟ್ ಬಳಸಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಆಹಾರ ಪದಾರ್ಥಗಳ ಕಲಬೆರಕೆ ತಡೆಗೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ತಪಾಸಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

