ಕಲಬುರಗಿ ಜಿಲ್ಲೆಯ ಮಹಾಗಾಂವ್ ಪೊಲೀಸ್ ಠಾಣೆಯ ಪಿಎಸ್‌ಐ ಬಸವರಾಜ್ ಚಿತಕೋಟೆ ಅವರ ವೈಯಕ್ತಿಕ ಕಾರಿಗೆ ಕಾನ್ಸ್ಟೇಬಲ್ ರಾಜಶೇಖರ ವರನಾಳ್ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಕಾನ್ಸ್ಟೇಬಲ್ ವಿರುದ್ಧ ದೂರು ನೀಡಿದ್ದಕ್ಕೆ ಆಕ್ರೋಶಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಜಶೇಖರ ವರನಾಳ್ ನಾಲ್ಕು ವರ್ಷ ಮಹಾಗಾಂವ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇತ್ತೀಚೆಗೆ ಚಿಂಚೋಳಿ ಠಾಣೆಗೆ ವರ್ಗಾವಣೆಯಾಗಿದ್ದ. ತನ್ನ ವಿರುದ್ಧ ದೂರು ದಾಖಲಿಸಿದ್ದಕ್ಕೆ ಸಿಟ್ಟಾಗಿ PSI ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸ್ಥಳದಲ್ಲಿದ್ದವರು ತಕ್ಷಣ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದ್ದು, ಕಾರಿಗೆ ಅಲ್ಪ ಹಾನಿಯಾಗಿದೆ. ಘಟನೆ ಸಂಬಂಧ PSI ಬಸವರಾಜ್ ಚಿತಕೋಟೆ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

