ಹಾಸನ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ 23 ವರ್ಷದ ಯುವತಿ ಲಾಡ್ಜ್ ರೂಮಿನಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ ಮೃತ ಯುವತಿ. ಪ್ರಿಯಕರ ರಘು ಹಾಗೂ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಮೂರು ದಿನಗಳ ಕಾಲ ಭೈರವೇಶ್ವರ ಬೆಟ್ಟ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಪ್ರವಾಸ ಮಾಡಿದ್ದ ತಂಡ, ಬಳಿಕ ಲಾಡ್ಜ್‌ನಲ್ಲಿ ತಂಗಿತ್ತು. ಸ್ನಾನಕ್ಕೆಂದು ತೆರಳಿದ್ದ ವರ್ಷ ರೂಮಿನಲ್ಲೇ ಮೃತಪಟ್ಟಿದ್ದಾಳೆ. ಕೂಡಲೇ ರಘು ಹಾಗೂ ಸ್ನೇಹಿತ ದರ್ಶನ್ ಆಕೆಯನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಯುವತಿಯ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಲಾಡ್ಜ್ ರೂಮಿನಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

