Breaking News

ಹು-ಧಾ.: ಗಣೇಶ ಮೆರವಣಿಗೆಯಲ್ಲಿ ನಿಯಮ ಮೀರಿ ಡಿಜೆ ಬಳಕೆ:ಆಪರೇಟರ್‌ಗಳ ವಿರುದ್ಧ 6 ಪ್ರಕರಣ ದಾಖಲು

ಹುಬ್ಬಳ್ಳಿ: ಗಣೇಶ ಮೂರ್ತಿ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದಲ್ಲಿ ಡಿಜೆ ಬಳಸಿ ಶಬ್ದ ಮಾಲಿನ್ಯ ನಿಯಮ ಉಲ್ಲಂಘಿಸಿದ ಆರೋಪದಡಿ ಹು-ಧಾ ಅವಳಿ ನಗರದಲ್ಲಿ ಡಿಜೆ ಮಾಲಕರು ಹಾಗೂ ಆಪರೇಟರ್‌ಗಳ ವಿರುದ್ಧ 6 ಪ್ರಕರಣಗಳು ದಾಖಲಾಗಿವೆ. ಹುಬ್ಬಳ್ಳಿ ಎಪಿಎಂಸಿ-ನವನಗರ ಹಾಗೂ ಧಾರವಾಡ ಉಪನಗರ ಠಾಣೆಯಲ್ಲಿ ತಲಾ 1, ಧಾರವಾಡ ಶಹರ ಹಾಗೂ ವಿದ್ಯಾಗಿರಿ ಠಾಣೆಯಲ್ಲಿ ತಲಾ 2 ಪ್ರಕರಣ ದಾಖಲಾಗಿವೆ. ಸೆ.14ರಂದು ಅಮರಗೋಳ-ಅಧ್ಯಾಪಕನಗರದಿಂದ ಗಾಮನಗಟ್ಟಿಗೆ ತೆರಳುತ್ತಿದ್ದ ಗಣೇಶ ಮೆರವಣಿಗೆಯಲ್ಲಿ ಅತಿಯಾದ ಶಬ್ದದ ಡಿಜೆ ಹಾಗೂ ಫೋಕಸ್ ಲೈಟ್‌ಗಳಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಶಬ್ದದಿಂದ ಶಬ್ದ ಮಾಲಿನ್ಯ ಉಂಟಾಗುವುದರ ಜೊತೆಗೆ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೂ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧಾರವಾಡದ ಮೂರು ಠಾಣೆಗಳಲ್ಲಿ ಡಿಜೆ ಮಾಲಕರು ಮತ್ತು ಆಪರೇಟರ್‌ಗಳ ವಿರುದ್ಧ 5 ಪ್ರಕರಣ ದಾಖಲಾಗಿವೆ ಎಂದು ಹು-ಧಾ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *