Breaking News

ರಸ್ತೆಬದಿ ಮಲಗಿದ್ದ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ

ಬೆಂಗಳೂರು: ರಸ್ತೆ ಬದಿ ಮಲಗಿದ್ದ 19 ವರ್ಷದ ಯುವಕನ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಾಡುಗೊಂಡನಹಳ್ಳಿ ಠಾಣೆ ವ್ಯಾಪ್ತಿಯ ವೆಂಕಟೇಶಪುರದಲ್ಲಿ ನಡೆದಿದೆ. ಮಹೇಶ್‌ ಕೊಲೆಯಾದ ಯುವಕ. ಸೆ.14ರಂದು ತಡರಾತ್ರಿ ರಾಮಟೆಂಟ್‌ ರಸ್ತೆಯ ಬದಿ ಮಹೇಶ್‌ ಮಲಗಿದ್ದ ವೇಳೆ ದುಷ್ಕರ್ಮಿಗಳು ಯಾವುದೋ ವಿಚಾರಕ್ಕೆ ಆತನೊಂದಿಗೆ ಜಗಳ ತೆಗೆದು ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹೇಶ್‌ ಮೃತಪಟ್ಟಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ವೆಲ್ಡಿಂಗ್‌ ಶಾಪ್‌ನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ ಮಹೇಶ್‌ಗೆ ಸ್ವಂತ ಮನೆ ಇರಲಿಲ್ಲ. ತಾಯಿಯೊಂದಿಗೆ ರಸ್ತೆ ಬದಿಯಲ್ಲೇ ವಾಸಿಸುತ್ತಿದ್ದ. ಕೊಲೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪತ್ನಿಯನ್ನು ಕತ್ತು ಹಿಸುಕಿ ಹತ್ಯೆಗೈದು ಇಡೀ ರಾತ್ರಿ ಶವದ ಪಕ್ಕದಲ್ಲೇ ಮಲಗಿದ್ದ ಪಾಪಿ ಪತಿ.!

ದೆಹಲಿ: ಮದ್ಯ ಸೇವಿಸುವುದನ್ನು ಪತ್ನಿ ವಿರೋಧಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ 32 ವರ್ಷದ ಗೀತಾ ಭಾಟಿ ಅವರನ್ನು ಕತ್ತು ಹಿಸುಕಿ ಹತ್ಯೆಗೈದ …

Leave a Reply

Your email address will not be published. Required fields are marked *